ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜಿಲ್ಲೆಯ ವಿವಿಧ ಯುವಕ/ಯುವತಿ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 30ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಆರ್. ರೋಹಿತ್ ಗಂಗಾಧರ್ ತಿಳಿಸಿದ್ದಾರೆ.
ಯುವಜನೋತ್ಸವವು ನಗರದ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದ್ದು, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.