ನಗರದ ಶಿರಾಗೇಟ್ನಲ್ಲಿರುವ ಸ್ಪೆμÁಲಿಟಿ ಪಶು ಆಸ್ಪತ್ರೆಯಲ್ಲಿ ಡಿಸೆಂಬರ್ 9 ರಿಂದ 15ರವರೆಗೆ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕೆಯನ್ನು ಹಾಕಿಸುವ ಮೂಲಕ ತುಮಕೂರು ನಗರವನ್ನು ರೇಬಿಸ್ ಮುಕ್ತ ನಗರವನ್ನಾಗಿಸಲು ಸಹಕರಿಸಬೇಕೆಂದು ಸ್ಪೆμÁಲಿಟಿ ಪಶು ಆಸ್ಪತ್ರೆ ಉಪ ನಿರ್ದೇಶಕ ಡಾ: ಗಿರೀಶ್ ಬಾಬು ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸಕ್ತ ವರ್ಷ “ರೇಬಿಸ್ ರೋಗವನ್ನು ನಿರ್ಮೂಲನೆ ಮಾಡಲು ಎಲ್ಲರೂ ಪಣ ತೊಡೋಣ” ಎಂಬ ಘೋಷವಾಕ್ಯದೊಂದಿಗೆ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.