ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಡಿ 2023 ಹಾಗೂ 2024ರಲ್ಲಿ ಸ್ನಾತಕೋತ್ತರ ಪದವಿ/ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್. ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ, ಡಿಪ್ಲೊಮಾ ಪ್ರಮಾಣ ಪತ್ರ ಆಧಾರ್ ಕಾರ್ಡ್, ಪಡಿತರ ಚೀಟಿ, ಅಭ್ಯರ್ಥಿಯ ಬ್ಯಾಂಕ್ ಪಾಸ್ ಪುಸ್ತಕ ಇತ್ಯಾದಿ ದಾಖಲಾತಿಗಳೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, 2023 ಹಾಗೂ 2024ರಲ್ಲಿ ಸ್ನಾತಕೋತ್ತರ ಪದವಿ/ಪದವಿ/ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ, ಕರ್ನಾಟಕದಲ್ಲಿ ವಾಸವಿರುವವರು ಈ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿಗಳು ಅಥವಾ ದೂರವಾಣಿ ಸಂಖ್ಯೆ 0816-2278488ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.