ಗಾಂಧಿ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಆಯುಕ್ತಾಲಯದಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತನಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ ತುಮಕೂರು ವಿಶ್ವವಿದ್ಯಾನಿಲಯದ ಎಂ.ಎ.(ಪತ್ರಿಕೋದ್ಯಮ) ಮೊದಲ ವರ್ಷದ ವಿದ್ಯಾರ್ಥಿ ಶರಣಪ್ಪ ಗುಡದೂರ ಅವರಿಗೆ 21,000 ರೂ.ಗಳ ನಗದು ಬಹುಮಾನ ನೀಡಲಾಗಿದೆ.
ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಶರಣಪ್ಪ ಅವರು “ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು” ಕುರಿತು ಬರೆದ ಪ್ರಬಂಧವು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.
ಮುಖ್ಯಮಂತ್ರಿಗಳಿAದ ಬಹುಮಾನ ವಿತರಣೆ :-
ಬೆಂಗಳೂರಿನ ವಾರ್ತಾ ಸೌಧದಲ್ಲಿ ಅಕ್ಟೋಬರ್ 2ರಂದು ನಡೆದ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 21,000 ರೂ.ಗಳ ನಗದು ಹಾಗೂ ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ವಾರ್ತಾ ಇಲಾಖೆ ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕಚಂದ್ರ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಇದ್ದರು.