ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ದಿನಾಂಕ: 27-11-2024 ಮಕ್ಕಳಿಗಾಗಿ ವಿಶೇಷ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನಾಡಿನ ಹೆಸರಾಂತ ಮಕ್ಕಳ ತಜ್ಞರಾದ ಡಾ.ವಸುಧಾ ನರೇಶ್ MBBS MS (Ophth.), Fellowship in Strabismus & Cataract ರವರು ಭಾಗವಹಿಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆಯನ್ನು ನೀಡುವರು. ಶಿಬಿರವು ಬೆಳಿಗ್ಗೆ 9.30 ರಿಂದ ಮಧ್ಯಾನ್ಹ 3.30ರವರೆಗೆ ನಡೆಯುತ್ತದೆ. ಮಕ್ಕಳಲ್ಲಿ ಕಂಡುಬರುವ ದೃಷ್ಟಿ ದೋಷ, ತಲೆ ನೋವು, ಕಣ್ಣು ಕೆಂಪಾಗಿರುವುದು, ಕಣ್ಣನ್ನು ಉಜ್ಜುವುದು, ಕಣ್ಣಲ್ಲಿ ಯಾವಾಗಲೂ ನೀರು ಮತ್ತು ಪಿಸಿರು ಸೋರುವುದು, ಮೆಳ್ಳಗಣ್ಣು, ಕಣ್ಣಿನ ಪೊರೆ, ರಾತ್ರಿ ವೇಳೆ ಕಣ್ಣು ಕಾಣಿಸದಿರುವುದು ಹಾಗೂ ಕಣ್ಣಿಗೆ ಸಂಬಂಧಪಟ್ಟ ಇನ್ನಿತರ ಯಾವುದಾದರೂ ತೊಂದರೆಗಳಿದ್ದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಿಬಿರಕ್ಕೆ ಕರೆತಂದು ಸೂಕ್ತ ಸಲಹೆ ಹಾಗೂ ಚಿಕಿತ್ಸೆಯನ್ನು ಪಡೆಯಬಹುದು ಎಂದು ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಸ್ವಾಮಿ ಜಪಾನಂದಜೀ ರವರು ತಿಳಿಸಿರುತ್ತಾರೆ.