ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನವೆಂಬರ್ 28ರ ಬೆಳಿಗ್ಗೆ 11ಗಂಟೆಗೆ ನಗರದ ಬಾಲಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು-ಕೊರತೆ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.
ಈ ಸಭೆಯನ್ನು 2024ರ ಡಿಸೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.