
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ)ಗಳ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ತರಬೇತಿ ಪಡೆಯಲಿಚ್ಛಿಸುವವರು ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 30ರೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತರಬೇತಿ ಕೇಂದ್ರ ಅಥವಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರದ ಪ್ರಾಂಶುಪಾಲರು ಅಥವಾ ಜಾಲತಾಣ https://hfwcom.karnataka.gov.in ಅನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಡಿಹೆಚ್ಓ ಡಾ: ಚಂದ್ರಶೇಖರ್ ತಿಳಿಸಿದ್ದಾರೆ.