ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಪೋಷಕತ್ವ ಕಾರ್ಯಕ್ರಮದಡಿ ಬಾಲನ್ಯಾಯ ಕಾಯ್ದೆ-2015 ಸೆಕ್ಷನ್-44ರ ಅನ್ವಯ ಪಾಲನೆ ಮತ್ತು ರಕ್ಷಣೆಯ ಅವಶ್ಯಕತೆಯಿರುವ ಮಕ್ಕಳನ್ನು ಅವರ ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ತಾತ್ಕಾಲಿಕವಾಗಿ ಸಾಕಲು ಕಳುಹಿಸುವ ಅವಕಾಶವಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಯೊಂದು ಮಗುವಿಗೂ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಹಕ್ಕಿರುತ್ತದೆ. ಆದರೆ ಕಾರಣಾಂತರಗಳಿಂದ ಕೆಲವು ಮಕ್ಕಳನ್ನು ಸರ್ಕಾರಿ/ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಮಗುವನ್ನು ಮಗುವಿನ ಸ್ವಂತ ಕುಟುಂಬದಲ್ಲಿ ಇರಿಸಲು ಸಾಧ್ಯವಾಗದಿದ್ದಾಗ ಮಕ್ಕಳ ಬೆಳವಣಿಗೆ ಹಿತದೃಷ್ಠಿಯಿಂದ ಪೋಷಕತ್ವ ಯೋಜನೆಯಡಿ ಇತರೆ ಕುಟುಂಬದಲ್ಲಿ ಬೆಳೆಯಲು ಮಕ್ಕಳ ಕಲ್ಯಾಣ ಸಮಿತಿಯಿಂದ ತೀರ್ಮಾನ ನಿಯಮಾನುಸಾರ ತೆಗೆದುಕೊಳ್ಳಲಾಗುವುದು.
ಈ ಹಿನ್ನೆಲೆಯಲ್ಲಿ ತುಮಕೂರಿನ ಬಾಲಮಂದಿರಗಳಲ್ಲಿರುವ 6-18 ವರ್ಷದ ಹೆಣ್ಣು ಮತ್ತು ಗಂಡು ಮಕ್ಕಳನ್ನು ಸಾಕಲು/ನೋಡಿಕೊಳ್ಳಲು ಆಸಕ್ತಿ ಇರುವ ಪೋಷಕರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಮಹಾತ್ಮಗಾಂಧಿ ಕ್ರೀಡಾಂಗಣ, ಮೊದಲನೇ ಮಹಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಗೆ ಅಥವಾ ಮೊ.ಸಂ: 9110857472/ ಸ್ಥಿರ ದೂರವಾಣಿ ಸಂಃ 0816-2956699ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.