ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ-150 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 7ರಂದು ತುಮಕೂರು ನಗರದ 23 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ಹಾಗೂ ಡಿಸೆಂಬರ್ 8ರಂದು ತುಮಕೂರು ನಗರದ 30 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಯಾವುದೇ ಲೋಪದೋóಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ಡಿಸೆಂಬರ್ 7ರ ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೆ ಹಾಗೂ ಡಿಸೆಂಬರ್ 8ರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ eóÉರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಎಂದು ಕಂಡುಬಂದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.