ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಮಹಾನಗರಪಾಲಿಕೆ ಆವರಣದಲ್ಲಿ “ಅಕ್ಕ ಕೆಫೆ” ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಅಕ್ಕ ಕೆಫೆ” ಕ್ಯಾಂಟೀನ್ ನಡೆಸಲು ಆಸಕ್ತಿಯುಳ್ಳವರು ನವೆಂಬರ್ 27ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಡೇ-ನಲ್ಮ್ ಯೋಜನೆಯಡಿ ನೋಂದಾಯಿತವಾಗಿರುವ ಮಹಿಳಾ ಸ್ವ-ಸಹಾಯ ಸಂಘ/ಪ್ರದೇಶ ಮಟ್ಟದ ಒಕ್ಕೂಟದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿದಾರರು ಸ್ವ-ಸಹಾಯ ಸಂಘದ ಸದಸ್ಯರ ಬಿಪಿಎಲ್ ಕಾರ್ಡ್, ಸ್ವ-ಸಹಾಯ ಸಂಘವು ಅಕ್ಕ ಕೆಫೆಯನ್ನು ನಿರ್ವಹಿಸಲು ಆಸಕ್ತಿ, ಇಚ್ಛೆ, ಬದ್ಧತೆ, ಕ್ಯಾಂಟೀನ್ ಪ್ರಾರಂಭಿಸಲು ಬಂಡವಾಳವನ್ನು ಹೂಡಲು ಆಸಕ್ತಿ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.
ಶಿಷ್ಯ ವೇತನ : ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೆÇೀಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ 25,000 ರೂ.ಗಳ ಶಿಷ್ಯವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾವುದೇ ಫೆಲೋಶಿಪ್ ಪಡೆಯದ ಅಭ್ಯರ್ಥಿಗಳು ಡಿಸೆಂಬರ್ 14ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಪಾವಗಡ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.ವಾ.ಸಂ. 0816-2279153ನ್ನು ಸಂಪರ್ಕಿಸಬೇಕೆಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.