ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲಾ ಮುಖ್ಯ ಶಿಕ್ಷಕರು, ಶಾಲಾ ಆಡಳಿತ ಮಂಡಳಿಯವರು ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಮುನ್ನ ಪೂರಕ ದಾಖಲೆ/ಮಾಹಿತಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿ ಕಡ್ಡಾಯವಾಗಿ ಅನುಮೋದನೆ ಪಡೆಯಬೇಕೆಂದು ತುಮಕೂರು ತಾಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹನುಮಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರವಾಸದಲ್ಲಿ ಇಲಾಖಾ ಮಾರ್ಗಸೂಚಿಯನ್ನು ಮೀರಿ ಪ್ರವಾಸ ಕೈಗೊಂಡು ಸಂಭವಿಸುವ ಯಾವುದೇ ಅವಘಡಗಳಿಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯವರೇ ಜವಾಬ್ದಾರರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.