ತಾಲ್ಲೂಕಿನಲ್ಲಿ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಶೇ.100ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತುಮಕೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ಅಧ್ಯಕ್ಷ ಪಿ.ಎಲ್.ರಮೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ತಾಲ್ಲೂಕು ಪಂಚಾಯಿತಿಯಲ್ಲಿ ಇತ್ತೀಚೆಗೆ ಗ್ಯಾರಂಟಿ ಯೋಜನೆಗಳ ಅನುμÁ್ಠನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ಪಡೆದರು. ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ಶೀಘ್ರಗತಿಯಲ್ಲಿ ತಲುಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುμÁ್ಠನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಜಂಟಿಯಾಗಿ ಎಲ್ಲ ಅನುμÁ್ಠನ ಇಲಾಖೆಗಳ ಪ್ರಗತಿ ವರದಿಯನ್ನು ಪರಿಶೀಲಿಸಿದರು. ನಂತರ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಹೆಚ್ಚು ಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ತುಮಕೂರು ತಾಲ್ಲೂಕಿನ ಗ್ಯಾರಂಟಿ ಯೋಜನೆಗಳ ಸದಸ್ಯ ಕಾರ್ಯದರ್ಶಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಕುಮಾರ್ ಕೆ., ತಾಲ್ಲೂಕು ಯೊಜನಾಧಿಕಾರಿ ಮತ್ತಿತರರು ಹಾಜರಿದ್ದರು.