ಮಾಧ್ಯಮ ಪಟ್ಟಿಯಲ್ಲಿ ಮಾನ್ಯತೆ ಪಡೆದಿರುವ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವತಿಯಿಂದ ನವೆಂಬರ್ 23 ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ನಗರದ ಹೊರಪೇಟೆ ಮುಖ್ಯರಸ್ತೆಯಲ್ಲಿರುವ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಘನ ಉಪಸ್ಥಿತಿ ವಹಿಸಲಿದ್ದು, ಕಾರ್ಯಕ್ರಮವನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ, ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಎಸ್.ಪರಮೇಶ, ಟಿಎಂಸಿಸಿ ಬ್ಯಾಂಕ್ ಅಧ್ಯಕ್ಷ ಎನ್.ಎಸ್ ಜಯಕುಮಾರ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ತುಮಕೂರು ಡಿವೈಎಸ್ಪಿ ಸಿ.ಚಂದ್ರಶೇಖರ್, ವಾರ್ತಾಧಿಕಾರಿ ಹಿಮಂತರಾಜು ಭಾಗವಹಿಸಲಿದ್ದು, ಗೌರವ ಅತಿಥಿಗಳಾಗಿ ಮಹಾನಗರಪಾಲಿಕೆ ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಪ್ರಶಾಂತ್ ಕೂಡ್ಲಗಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾಧಿಕಾರಿಗಳ ಕಚೇರಿ ಅಧೀಕ್ಷಕ ಜಿ.ವಿ.ಮೋಹನ್ ಕುಮಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎನ್. ತ್ಯಾಗರಾಜು, ಜನಜಾಗೃತಿ ವೇದಿಕೆ ಅಧ್ಯಕ್ಷ ಅಮರನಾಥಶೆಟ್ಟಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ, ಎಸ್.ಕೆ.ಅಯೋಧ್ಯರಾಮ ಶೆಟ್ಟಿ ಅಂಡ್ ಸನ್ಸ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ಬದ್ರೀಶ್ ರಾಮ್, ಆದಿತ್ಯ ಪ್ರಾಪರ್ಟೀಸ್ ಮಾಲೀಕ ಪುನೀತ್ ಗೌಡ, ಬೆಂಗಳೂರು ಕಡಬಮ್ಸ್ ಗ್ರೂಪ್ಸ್ ಮಾಲೀಕ ಅನಂತರಾಗ್ ಯಲಮೂರಿ, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಪ್ರಸಾದ್, ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮೂಡ್ಲಗಿರಿ, ಸ್ಪೂರ್ತಿ ಡೆವಲಪರ್ಸ್ ಮಾಲೀಕ ಎಸ್.ಪಿ.ಚಿದಾನಂದ್, ಬೆಳ್ಳಿ ರಕ್ತನಿಧಿ ಕೇಂದ್ರದ ಮಾಲೀಕ ಬೆಳ್ಳಿ ಲೋಕೇಶ್, ಬಿಜೆಪಿ ಯುವ ಮುಖಂಡ ಟಿ.ವೈ.ಯಶಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಿವಣ್ಣ, ಶ್ರೀ ಬೈರವ ಹೋಟೆಲ್ ಮಾಲೀಕ ಪ್ರಕಾಶ್ ಮೂರ್ತಿ, ಗಣೇಶ್ ಡ್ರಸಸ್ಸ್ ಮಾಲೀಕ ತಿಮ್ಮಾರೆಡ್ಡಿ ಸೇರಿದಂತೆ ಗಣ್ಯರು, ಅಧಿಕಾರಿಗಳು, ಪತ್ರಿಕಾ ಸಂಪಾದಕರು, ಪತ್ರಕರ್ತರು ಭಾಗವಹಿಸಲಿದ್ದಾರೆ.
ರಾಜ್ಯ ಕಾರ್ಯಕಾರಿಣಿ ಸಭೆಗೆ ವಾರ್ತಾ ಇಲಾಖೆಯಿಂದ ಮಾನ್ಯತೆ ಪಡೆದ ದಿನಪತ್ರಿಕೆಗಳ ರಾಜ್ಯದ ಸುಮಾರು 100ಕ್ಕೂ ಹೆಚ್ಚು ಸಂಪಾದಕರು ಭಾಗವಹಿಸಲಿದ್ದಾರೆ. ತುಮಕೂರು ವಿವಿ ಗೌರವ ಡಾಕ್ಟರೇಟ್ ಪುರಸ್ಕೃತರಾದ ಡಾ.ಹೆಚ್.ಜಿ.ಚಂದ್ರಶೇಖರ್, ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎನ್.ಬಿ.ಪ್ರದೀಪ್ ಕುಮಾರ್, ಪಿ.ಎನ್.ಮಂಜುನಾಥಗೌಡ, ಸಂಜೆವಾಣಿ ರಮೇಶ್, ತುರುವೇಕೆರೆ ಮಲ್ಲಿಕಾರ್ಜುನ ದುಂಡ, ಚೇಳೂರು ಸಿ.ಟಿ.ಮೋಹನ್ರಾವ್, ಹೆಚ್.ವಿ.ವೆಂಕಟಾಚಲ ಹಾಗೂ ತುಮಕೂರು ಜಿಲ್ಲೆಯ ಹಿರಿಯ ಸಂಪಾದಕರಾದ ಗಂಗಹನುಮಯ್ಯ, ತೊ.ಗ.ಅಡವೀಶಪ್ಪ, ಟಿ.ಎಸ್.ಗಟ್ಟಿ ಹಾಗೂ ಗದಗ ಜಿಲ್ಲೆಯ ಮಂಜುನಾಥ ಬಸಪ್ಪ ಅಬ್ಬಿಗೇರಿ, ವಿಜಯಪುರ ಜಿಲ್ಲೆಯ ಕೆ.ಕೆ.ಕುಲಕರ್ಣಿ, ಕಲಬುರ್ಗಿ ಜಿಲ್ಲೆಯ ಶಂಕರ್ ಕೋಡ್ಲ ಹಾಗೂ ಮಂಡ್ಯ ಜಿಲ್ಲೆಯ ರಾಮಕೃಷ್ಣ ಅವರನ್ನು ಗೌರವಿಸಲಾಗುವುದು.