
ತಿಪಟೂರು ನಗರಸಭೆಯ 2025-26ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿ ತಯಾರಿಸಲು ಅಧ್ಯಕ್ಷ ಯಮುನಾ ಎ.ಎಸ್. ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ತಿಪಟೂರು ನಗರಸಭಾ ಸಭಾಂಗಣದಲ್ಲಿ ಮೊದಲನೇ ಸುತ್ತಿನ ಸಾರ್ವಜನಿಕ ಸಮಾಲೋಚನಾ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ.
ಸಭೆಯಲ್ಲಿ ತಿಪಟೂರು ನಗರದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹೋಟಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ನಸಿರ್ಂಗ್ ಹೋಮ್ಸ್ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಪದಾಧಿಕಾರಿಗಳು, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಆಯವ್ಯಯ ತಯಾರಿಕೆಗೆ ಸಲಹೆ/ಅಭಿಪ್ರಾಯಗಳನ್ನು ನೀಡಬೇಕೆಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.