ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನವೆಂಬರ್ 24ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.
ಕ್ರೀಡಾಕೂಟದ ಪ್ರಯುಕ್ತ ಅಂದು ಬೆಳಿಗ್ಗೆ 8 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಕ್ರೀಡಾಜ್ಯೋತಿಯ ಭವ್ಯ ಮೆರವಣಿಗೆ ನಡೆಯಲಿದೆ. ರಾಜ್ಯ ಜಲಶಕ್ತಿ ಹಾಗೂ ರೈಲ್ವೆ ಖಾತೆ ಕೇಂದ್ರ ಸಚಿವರು ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಾಧಕರನ್ನು ಸನ್ಮಾನಿಸಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆವಹಿಸಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹಿರಿಯ ಕ್ರಿಕೆಟ್ ಆಟಗಾರರು ಹಾಗೂ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ದೊಡ್ಡಗಣೇಶ್, ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಸೇರಿದಂತೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.